ನಾಳೆಯಿಂದ ಬೆಂಗಳೂರು ಸೇರಿದಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು: ನಾಳೆಯಿಂದ (ನ.5) ಬೆಂಗಳೂರು ಸೇರಿದಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಹಿನ್ನೆಲೆ ನಾಗರಿಕರು ಮತ್ತು ಮೀನುಗಾರರು ಎಚ್ಚರಿಕೆಯಿಂದ ಇರಲು ಇಲಾಖೆ ಸೂಚಿಸಿದೆ. ದೀಪಾವಳಿ ಹಬ್ಬದ ನಂತರ ಕೆಲವು ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಕಂಡುಬಂದಿದ್ದರೂ, ನವೆಂಬರ್ 5ರಿಂದ ಮತ್ತೆ ಮಳೆಯ ಸಾದ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಬುಧವಾರದಿಂದ ಮುಂದಿನ ಎರಡು ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಿಸಿದೆ.