ರಿಷಬ್ ಶೆಟ್ಟಿ ನಿರ್ದೇಶನದ ‘ಸ ಹಿ ಪ್ರಾ ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ’ ಚಿತ್ರಕ್ಕೆ ಈ ಹಿಂದೆ ರಾಜ್ಯ ಪ್ರಶಸ್ತಿ ಘೋಷಿಸಲಾಗಿತ್ತು. ನಿನ್ನೆ (ನವೆಂಬರ್ 3) ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಣೆ ನಡೆಯಿತು. ಈ ವೇಳೆ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿಯವರೊಂದಿಗೆ ಆಗಮಿಸಿದ್ದರು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ರಿಷಬ್ ಶೆಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2018ರಲ್ಲಿ ಮೈಸೂರಿನಲ್ಲಿ ತಮ್ಮ ‘ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರವನ್ನು ವೀಕ್ಷಿಸಿದ್ದನ್ನು ನೆನೆದು ಸಂತಸ ವ್ಯಕ್ತಪಡಿಸಿದರು.

