ಬಿಗ್ ಬಾಸ್ ಕನ್ನಡ 12ರಲ್ಲಿ ಮಿಂಚುತ್ತಿರುವ ಗಿಲ್ಲಿ ನಟ, ದರ್ಶನ್ ಅವರ ‘ಡೆವಿಲ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ದರ್ಶನ್ ಜಾಮೀನಿನ ನಂತರ ಶೂಟಿಂಗ್ ಪೂರ್ಣಗೊಳಿಸಿದ್ದು, ಗಿಲ್ಲಿಯ ಪೋಸ್ಟರ್ ಕೂಡ ಬಿಡುಗಡೆಯಾಗಿದೆ. ಡಿಸೆಂಬರ್ 12ಕ್ಕೆ ‘ಡೆವಿಲ್’ ತೆರೆಗೆ ಬರಲಿದ್ದು, ರೇಣುಕಾಸ್ವಾಮಿ ಕೇಸ್ ನಂತರ ದರ್ಶನ್ ಮೊದಲ ಚಿತ್ರ ಇದಾಗಲಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಗಿಲ್ಲಿ ನಟ ಅವರು ಮಿಂಚುತ್ತಿದ್ದಾರೆ. ಅವರು ಒಳಗೆ ಉತ್ತಮ ಆಟ ಆಡುತ್ತಿರುವಾಗಲೇ ಹೊರಗೆ ಒಂದು ವಿಶೇಷ ವಿಚಾರ ರಿವೀಲ್ ಆಗಿದೆ. ಅವರು ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದಲ್ಲಿ ನಟಿಸಿರುವ ಬಗ್ಗೆ ಅಪ್ಡೇಟ್ ನೀಡಲಾಗಿದೆ. ಜೊತೆಗೆ ಪೋಸ್ಟರ್ ಕೂಡ ಬಿಡುಗಡೆ ಆಗಿದೆ. ಈ ಪೋಸ್ಟರ್ ಗಮನ ಸೆಳೆಯೋ ರೀತಿಯಲ್ಲಿ ಇದೆ.

ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಕಳೆದ ವರ್ಷ ದರ್ಶನ್ ಜೈಲು ಸೇರಿದರು. ಕರ್ನಾಟಕ ಹೈಕೋರ್ಟ್ ನೀಡಿದ ಜಾಮೀನು ಪಡೆದು ಹೊರಗೆ ಬಂದ ಅವರು, ‘ಡೆವಿಲ್’ ಚಿತ್ರದ ಶೂಟ್ ಪೂರ್ಣಗೊಳಿಸಿದ್ದರು. ಜೊತೆಗೆ ಡಬ್ಬಿಂಗ್ ಕೂಡ ಪೂರ್ಣಗೊಳಿಸಿದ್ದಾರೆ. ಈಗ ತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಇದೆ. ಹೀಗಿರುವಾಗಲೇ ಚಿತ್ರದಲ್ಲಿ ನಟಿಸಿದ ಕಲಾವಿದರ ಪೋಸ್ಟರ್ ರಿಲೀಸ್ ಮಾಡಲಾಗುತ್ತಿದೆ.
ಗಿಲ್ಲಿ ನಟ ಕೂಡ ದರ್ಶನ್ ಜೊತೆ ‘ಡೆವಿಲ್’ ಸಿನಿಮಾದಲ್ಲಿ ನಟಿಸಿದ್ದಾರೆ. ಪ್ರಮುಖ ಪಾತ್ರವನ್ನು ಅವರು ಮಾಡುತ್ತಿದ್ದಾರೆ ಎಂದು ತಂಡ ಮಾಹಿತಿ ನೀಡಿದೆ. ಶರ್ಟ್ ಹಾಕಿ, ಅದಕ್ಕೆ ಟೈ ಹಾಕಿ ಗಿಲ್ಲಿ ಅವರು ಕಾಣಿಸಿಕೊಂಡಿದ್ದಾರೆ ಅನ್ನೋದು ವಿಶೇಷ.
