ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಮತ್ತು ಆರ್. ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠವು ಅರ್ಜಿಯನ್ನು ವಿಚಾರಣೆ ಮಾಡಿದ ಬಳಿಕ, “ಆದೇಶ ಮತ್ತು ದಾಖಲೆಗಳನ್ನು ಈಗಾಗಲೇ ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ಮತ್ತೊಮ್ಮೆ ಪರಿಶೀಲನೆ ನಡೆಸುವ ಅಗತ್ಯವಿಲ್ಲ” ಎಂದು ಅಭಿಪ್ರಾಯಪಟ್ಟಿದೆ.

ಈ ಹಿಂದೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ಅದೇ ಆದೇಶದ ವಿರುದ್ಧ ಪವಿತ್ರಾ ಗೌಡ ಪುನರ್ ಪರಿಶೀಲನೆಗಾಗಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ಮಗಳು ಮತ್ತು ಪೋಷಕರ ಪೋಷಣೆಗಾಗಿ ಜಾಮೀನು ಕೋರಿದ್ದ ಪವಿತ್ರಾ ಗೌಡ, ಏಕಾಂಗಿಯಾಗಿ ಕಾನೂನು ಹೋರಾಟ ಮುಂದುವರಿಸಿಕೊಂಡಿದ್ದಾರೆ.

