ದಾವಣಗೆರೆ, ನವೆಂಬರ್ 09: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊಸೂರು ಗ್ರಾಮದ ಬಳಿ ಭದ್ರಾ ಕಾಲುವೆಗೆ ಕಾರು ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಲ್ಲಿಕಾರ್ಜುನ (29) ಹಾಗೂ ಸಿದ್ದೇಶ್ (38) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದಾವಣಗೆರೆ ಮೂಲದ ಆರು ಮಂದಿ ಮಂಗಳೂರು ಪ್ರವಾಸ ಮುಗಿಸಿಕೊಂಡು ವಾಪಸ್ ಬರುತ್ತಿರುವ ವೇಳೆ, ಚಾಲಕನಿಗೆ ನಿದ್ದೆ ಮಂಪರ ಬಂದ ಪರಿಣಾಮ ಕಾರು ನಿಯಂತ್ರಣ ತಪ್ಪಿ ಭದ್ರಾ ಕಾಲುವೆಗೆ ಬಿದ್ದಿದೆ ಎಂದು ತಿಳಿದುಬಂದಿದೆ. ಘಟನೆಯ ಸಮಯದಲ್ಲಿ ಕಾರಿನಲ್ಲಿದ್ದ ನಾಲ್ವರು ಈಜಿಹೋಗಿ ಪಾರಾಗಿದ್ದು, ಸಂತೇಬೆನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

