ಪುಣೆ, ನವೆಂಬರ್ 14: ಮಹಾರಾಷ್ಟ್ರದ ಪುಣೆ–ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಂಟೇನರ್ ಟ್ರಕ್ ನಿಯಂತ್ರಣ ಕಳೆದುಕೊಂಡು ಹಲವು ವಾಹನಗಳಿಗೆ ಗುದ್ದಿದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾವಲ್ ಸೇತುವೆ ಬಳಿಯೇ ಈ ದುರ್ಘಟನೆ ನಡೆದಿದೆ.

ಗುದ್ದಾಟದ ಹೊಡೆತಕ್ಕೆ 2–3 ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿಶಾಮಕ ದಳವು ತಕ್ಷಣ ಸ್ಥಳಕ್ಕೆ ಧಾವಿಸಿ ಅಗ್ನಿ ನಂದಿಸುವ ಕಾರ್ಯ ನಡೆಸುತ್ತಿದೆ. ಘಟನೆ ಕುರಿತು ಮಾಹಿತಿ ನೀಡಿರುವ ಡಿಸಿಪಿ ಸಂಭಾಜಿ ಕದಮ್, ಟ್ರಕ್ ನಿಯಂತ್ರಣ ತಪ್ಪಿದ ಪರಿಣಾಮ ಅಪಘಾತಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.
