ನವದೆಹಲಿ, ನವೆಂಬರ್ 14: ದೆಹಲಿಯಲ್ಲಿ ನವೆಂಬರ್ 10ರಂದು ನಿಗೂಢ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ದಾಳಿಗೆ ಕಾರಣನಾಗಿದ್ದ ಡಾ. ಉಮರ್ ನಬಿ ಅವರ ಮನೆಯನ್ನು ರಾತ್ರೋರಾತ್ರಿ ನೆಲಸಮ ಮಾಡಲಾಗಿದೆ. ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ಅವರ ಮನೆ ಇತ್ತು. ಉಮರ್ ನಬಿ ಮೊನ್ನೆ ತಾನೇ ಪ್ರಯಾಣಿಸುತ್ತಿದ್ದ ಕಾರು ಸ್ಫೋಟಕ್ಕೆ ಒಳಗಾಗಿದ್ದು, ಆ ಸ್ಫೋಟದಲ್ಲಿ ಆತನು ಸಾವನ್ನಪ್ಪಿದ್ದಾನೆ. ಡಿಎನ್‌ಎ ಪರೀಕ್ಷೆಯಲ್ಲಿ ಮೃತದೇಹವು ಅವನದ್ದೇ ಎಂಬುದು ದೃಢಪಟ್ಟಿದೆ. ಹುಂಡೈ ಐ20 ಕಾರಿನಲ್ಲಿ ಸಂಭವಿಸಿದ ಈ ಭಾರಿ ಸ್ಫೋಟದಲ್ಲಿ 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಅನೇಕರಿಗೆ ಗಾಯಗಳಾಗಿವೆ.

