ಕಾರವಾರ: ಬೇಲೆಕೇರಿ ಬಂದರು ಮೂಲಕ ಅಕ್ರಮ ಕಬ್ಬಿಣದ ಅದಿರು ಸಾಗಾಟ ಹಾಗೂ ಇದಕ್ಕೆ ಸಂಬಂಧಿಸಿದ ಹಣಕಾಸು ಅಕ್ರಮಗಳ ಪ್ರಕರಣದಲ್ಲಿ ಆರೋಪಿಯಾಗಿರುವ ಕಾರವಾರ–ಅಂಕೋಲಾ ಶಾಸಕ ಸತೀಶ್ ಸೈಲ್ ಅವರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಶಾಸಕರಿಗೆ ಪೂರ್ವದಲ್ಲಿ ನೀಡಲಾಗಿದ್ದ ಮಧ್ಯಂತರ ವೈದ್ಯಕೀಯ ಜಾಮೀನು ಅವಧಿಯನ್ನು ನ್ಯಾಯಾಲಯವು ನವೆಂಬರ್ 20ರವರೆಗೆ ವಿಸ್ತರಿಸುವಂತೆ ಆದೇಶಿಸಿದೆ.

ಈ ಕುರಿತು ಆದೇಶ ಹೊರಡಿಸಿದ ನ್ಯಾಯಮೂರ್ತಿಗಳು, ಶಾಸಕರ ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಲು ಅರ್ಹ ವೈದ್ಯರೊಬ್ಬರ ಹೆಸರನ್ನು ಸೂಚಿಸಲು ಜಾರಿ ನಿರ್ದೇಶನಾಲಯಕ್ಕೆ (ED) ನಿರ್ದೇಶನ ನೀಡಿದ್ದಾರೆ. ಇದಕ್ಕೆ ಸೇರಿ, ಸತೀಶ್ ಸೈಲ್ ಅವರು ತಮ್ಮ ಸಂಪೂರ್ಣ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.

