ಕಾರವಾರದಲ್ಲಿ ದುರ್ಘಟನೆ – ಸ್ಕೂಟಿ–ಬೈಕ್ ಮುಖಾಮುಖಿ, ಸ್ಥಳದಲ್ಲೇ ಸಾವನ್ನಪ್ಪಿದ ಬಾಲಕ

ಕಾರವಾರ: ನಗರದ ಆರ್‌ಟಿಒ ಕಚೇರಿಯ ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ 15 ವರ್ಷದ ಬಾಲಕ ದಾರುಣ ಅಂತ್ಯ ಕಂಡಿದ್ದಾನೆ. ಯಲ್ಲಾಪುರ ತಾಲೂಕಿನ ಇಡಗುಂದಿ ಮೂಲದ ಚಿರಂಜೀವ್ ಬೃಹ್ಮಾನಂದ ಕುಂಜಿ ಮೃತನಾಗಿರುವುದು ದೃಢಪಟ್ಟಿದೆ. ತಾಯಿಯೊಂದಿಗೆ ಕಾರವಾರದ ಮಾಜಾಳಿಯಲ್ಲಿ ವಾಸಿಸುತ್ತಿದ್ದ ಬಾಲಕ, ಸಂಜೆ ನಗರಕ್ಕೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಪ್ರಾಥಮಿಕ ಮಾಹಿತಿಯಂತೆ, ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಚಿರಂಜೀವ್‌ಗೆ ಹಿಂದಿನಿಂದ ವೇಗವಾಗಿ ಬಂದ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಬುಲೆಟ್ ಬೈಕ್ ಡಿಕ್ಕಿ ಹೊಡೆದಿದ್ದು, ಭೀಕರವಾದ ಝಟ್ಟೆಯಿಂದ ಬಾಲಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ.

ಅಪಘಾತವನ್ನು ಕಂಡ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ನಂತರ ಬಾಲಕನ ಶವ ಹಾಗೂ ಗಾಯಾಳುಗಳನ್ನು ಅಂಬುಲೆನ್ಸ್ ಮೂಲಕ ಕಾರವಾರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಬಲವಾದ ಝಟ್ಟೆಯಿಂದ ಬಾಲಕನ ತಾಯಿ ಹಾಗೂ ಬುಲೆಟ್ ಬೈಕ್‌ನಲ್ಲಿ ಇದ್ದ ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿದ್ದು, ಮುಂದಿನ ಚಿಕಿತ್ಸೆಗೆ ಅವರನ್ನು ಗೋವಾದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಕುರಿತು ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.