ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ- ರೂಪಾಲಿ ನಾಯ್ಕ ಸಂತಾಪ

ಕಾರವಾರ : ವೃಕ್ಷಮಾತೆ ಎಂದೇ ಪ್ರಸಿದ್ಧರಾದ ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದ್ದು, ಅವರ ಅಗಲಿಕೆ ಇಡೀ ರಾಜ್ಯಕ್ಕೆ ನೋವುಂಟು ಮಾಡಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ರೂಪಾಲಿ ಎಸ್ ನಾಯ್ಕ ಸಂತಾಪ ಸೂಚಿಸಿದ್ದಾರೆ. ಮಕ್ಕಳಿಲ್ಲದ ದುಃಖ ಮರೆಯಲು ರಸ್ತೆ ಬದಿ ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಮಕ್ಕಳಿಲ್ಲದ ಕೊರಗನ್ನು ಮರೆಯುತ್ತಿದ್ದರು.

ಸಾಲುಮರದ ತಿಮ್ಮಕ್ಕ ನಿಧನರಾದ ಸುದ್ದಿ ತಿಳಿದು ವಿಷಾದವಾಯಿತು. ಗಿಡ-ಮರಗಳನ್ನು ಬೆಳೆಸುವುದರೊಂದಿಗೆ ಪರಿಸರ ಸಂರಕ್ಷಣೆ ಬಗ್ಗೆ ವಿಶೇಷ ಕಾಳಜಿವಹಿಸುತ್ತಿದ್ದ ಅವರು ರಾಜ್ಯದೆಲ್ಲೆಡೆ ಸಂಚರಿಸಿ ಪರಿಸರ ಸಂರಕ್ಷಣೆ ಬಗ್ಯೆ ಅರಿವು, ಜಾಗೃತಿ ಮೂಡಿಸುತ್ತಿದ್ದರು.
ಸಸಿಗಳನ್ನು ಮಕ್ಕಳಂತೆ ಪ್ರೀತಿಯಿಂದ ಸಾಕಿ ಸಲಹಿದ್ದಾರೆ. ರಾಜ್ಯದೆಲ್ಲೆಡೆ ಸಂಚರಿಸಿ ಪರಿಸರ ಸಂರಕ್ಷಣೆ ಬಗ್ಯೆ ಅವರು ಜಾಗೃತಿ ಮೂಡಿಸಿದ್ದಾರೆ.

ಅನಕ್ಷರಕ್ಷಸ್ಥೆಯಾಗಿದ್ದರೂ ಸಮಾಜದ ಮುಂದಿನ ಪೀಳಿಗೆ ಬಗ್ಗೆ ಅಪಾರವಾದ ಕಾಳಜಿ ಹೊಂದಿದ್ದ ತಿಮ್ಮಕ್ಕ ಸಾಧನೆಗೆ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿಗಳು ಅರಸಿ ಬಂದಿದ್ದವು. ಅವರ ಸಾಧನೆಗೆ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಗೌರವ ಡಾಕ್ಟ-ರೇಟ್ ನೀಡಿ ಗೌರವಿಸಿತ್ತು. ಅವರ ಸಾಧನೆ ಮತ್ತು ಆದರ್ಶ ನಮ್ಮಲ್ಲರಿಗೂ ಸ್ಪೂರ್ತಿದಾಯಕ ಚಿಲುಮೆಯಾಗಲಿ ಎಂದು ಆಶಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.