ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಸಾದಾರಣ ಮಳೆಯ ಸಾಧ್ಯತೆ

ಬೆಂಗಳೂರು, ನವೆಂಬರ್ 22: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಭಾಗಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ತುಮಕೂರು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಂಪೂರ್ಣವಾಗಿ ಒಣಹವೆಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಪ್ರಕಟಿಸಿದೆ.

ಇದೇ ರೀತಿಯಲ್ಲಿ ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣಹವಾಮಾನ ಇರಲಿದೆ ಎಂದು ಇಲಾಖೆ ಹೇಳಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಲಿದ್ದು, ಗರಿಷ್ಠ ತಾಪಮಾನ 27°C ಮತ್ತು ಕನಿಷ್ಠ ತಾಪಮಾನ 18°C ಇರುತ್ತದೆ. ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.