ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ನಿಧನ

ಬೆಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ನಾಗರಭಾವಿ ಯುನಿಟಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳಗ್ಗೆ ಜಿಮ್‌ಗೆ ಹೊಗಿ ವರ್ಕೌಟ್ ಮಾಡುವಾಗ ಎದೆನೋವು ಕಾಣಿಸಿಕೊಂಡಿತ್ತು. ಬಳಿಕ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮದ್ಯೆ ಸಾವನ್ನಪ್ಪಿದ್ದಾರೆ.

ಮೂಲತಃ ರಾಮದುರ್ಗದವರಾದ ಗುರುಲಿಂಗಸ್ವಾಮಿ ಹಲವು ಪತ್ರಿಕೆಗಳಲ್ಲಿ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿದ್ದರು. ಪ್ರಸ್ತುತ ಸಿಎಂ ಬೊಮ್ಮಾಯಿ ಮಾಧ್ಯಮ ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.