ವರ್ಡ್ ಪವರ್ ಈಸ್ ವರ್ಲ್ಡ್ ಪವರ್: ಡಿಕೆಶಿ ಮಾರ್ಮಿಕ ಎಕ್ಸ್ ಸಂದೇಶ!

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ತೀವ್ರವಾಗಿರುವಾಗ ಡಿಕೆ ಶಿವಕುಮಾರ್ ಮಾರ್ಮಿಕ X ಸಂದೇಶ ಪ್ರಕಟಿಸಿದ್ದಾರೆ. ಕೊಟ್ಟ ಮಾತು ಉಳಿಸಿಕೊಳ್ಳುವುದೇ ದೊಡ್ಡ ಶಕ್ತಿ ಎಂದು ಅವರು ಪೋಸ್ಟ್ ಮಾಡಿದ್ದು, ಈ ಮೂಲಕ ಅವರು ಏನು ಸೂಚಿಸುತ್ತಿದ್ದಾರೆ ಎಂಬ ಕುತೂಹಲ ಮೂಡಿದೆ. ಇದಕ್ಕೆ ತರಹೇವಾರಿ ಕಮೆಂಟ್​ಗಳೂ ವ್ಯಕ್ತವಾಗಿವೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ತೀವ್ರಗೊಂಡಿರುವ ಸಂದರ್ಭದಲ್ಲಿಯೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾರ್ಮಿಕವಾಗಿ ಸಂದೇಶ ಪ್ರಕಟಿಸಿದ್ದಾರೆ. ಇದು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ಬುಧವಾರವಷ್ಟೇ ಡಿಕೆ ಶಿವಕುಮಾರ್​ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ‘ಪ್ಲೀಸ್ ವೈಟ್’ ಎಂಬ ಸಂದೇಶ ಕಳುಹಿಸಿದ್ದರು. ಇದು ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ನಂತರದಲ್ಲಿ ಕರ್ನಾಟಕ ಕಾಂಗ್ರೆಸ್‌ನಲ್ಲಿ ಹಲವು ಕ್ಷಿಪ್ರ ಬೆಳವಣಿಗೆಗಳು ನಡೆದಿದ್ದವು. ಅದರ ಬೆನ್ನಲ್ಲೇ ಡಿಕೆ ಶಿವಕುಮಾರ್ ಮಾರ್ಮಿಕವಾಗಿ ಸಂದೇಶ ಪ್ರಕಟಿಸಿದ್ದಾರೆ.