ಬೈಕ್‌ಗೆ ಕಂಟೇನರ್ ಡಿಕ್ಕಿ – ತಾಯಿ-ಮಗ ದಾರುಣ ಸಾ**

ಬೆಂಗಳೂರು: ಮೈಸೂರು ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ–ಮಗ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತರನ್ನು ಅಶ್ವಿನಿ ಮತ್ತು ಮಗ ಅಭಿಲಾಷ್ ಎಂದು ಗುರುತಿಸಲಾಗಿದೆ.

ಕಂಟೇನರ್‌ ಒಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರೂ ಪ್ರಾಣ ಕಳೆದುಕೊಂಡಿದ್ದಾರೆ. ಅಪಘಾತದ ವೇಳೆ ತಾಯಿ–ಮಗ ಇಬ್ಬರೂ ಹೆಲ್ಮೆಟ್‌ ಧರಿಸಿರಲಿಲ್ಲ ಎನ್ನಲಾಗಿದೆ. ಇದರ ಪರಿಣಾಮ ತಲೆಗೆ ಗಂಭೀರ ಗಾಯವಾಗಿ, ಅಧಿಕ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ.