ಸಿದ್ದರಾಮಯ್ಯ ಅಭಿಮಾನಿಗಳಿಂದ ರಾಣೆಬೆನ್ನೂರು ಬಂದ್.!

ಹಾವೇರಿ: ಮಾಜಿ ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಖಂಡನೆ‌ ವ್ಯಕ್ತವಾದ ಬೆನ್ನಲ್ಲೇ ಸಿದ್ದರಾಮಯ್ಯ ಅಭಿಮಾನಿ ಬಳಗದಿಂದ ರಾಣೆಬೆನ್ನೂರು ನಗರ ಬಂದ್ ಗೆ ಕರೆ ನೀಡಲಾಗಿದೆ.

ಪ್ರತಿಭಟನಾ ಮೆರವಣಿಗೆಯಲ್ಲಿ ಸಿದ್ದರಾಮಯ್ಯ ಭಾವಚಿತ್ರ ಹಿಡಿದು ನಗರದ ಕೆಇಬಿ ಗಣಪತಿ ದೇವಸ್ಥಾನದಿಂದ ನಗರದ ಪ್ರಮುಖ ಬೀದಿಗಳಲ್ಲಿ ‌ಸಂಚರಿಸಿ ತಹಶೀಲ್ದಾರ ಕಚೇರಿವರೆಗೆ ಸಾಗಲಿದೆ. ಬಂದ್ ಹಿನ್ನೆಲೆ ಅಂಗಡಿ ಮುಂಗಟ್ಟುಗಳಿಗೆ ಬೀಗ ಹಾಕಲಾಗಿದ್ದು, ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.