ಉಡುಪಿ:
ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ಗೀತೋತ್ಸವದ ಸಮಾರೋಪ ಸಮಾರಂಭದಲ್ಲಿ ಆಂಧ್ರ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಭಾಗವಹಿಸಲಿದ್ದಾರೆ. ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ಅವರು ಅಲ್ಲಿಂದ ಉಡುಪಿ ತಲುಪಿದ್ದಾರೆ.

ಪರ್ಯಾಯ ಪುತ್ತಿಗೆ ಮಠಾಧೀಶರ ನೇತೃತ್ವದಲ್ಲಿ ಗೀತೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ತಿಂಗಳ ಹಿಂದೆ ಪೇಜಾವರ ಸ್ವಾಮೀಜಿ ಉದ್ಘಾಟಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಇದೇ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇಂದು ಗೀತೋತ್ಸವದ ಸಮಾರೋಪ ಸಮಾರಂಭಕ್ಕೆ ಆಂಧ್ರದ ಡಿಸಿಎಂ ಪವನ್ ಕಲ್ಯಾಣ್ ಅತಿಥಿಯಾಗಿ ಭಾಗಿಯಾಗಿದ್ದಾರೆ.
