ಇಂದು ವಿಧಾನಸಭೆಯಲ್ಲಿ ದ್ವೇಷ ಭಾಷಣ ನಿಯಂತ್ರಣ ವಿಧೇಯಕ ಮಂಡನೆ

ಬೆಳಗಾವಿ/ಬೆಂಗಳೂರು: ಇಂದು (ಡಿ.10) ವಿಧಾನಸಭೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಅವರು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮತ್ತು ನಿಯಂತ್ರಣ ವಿಧೇಯಕ-2025 ಅನ್ನು ಮಂಡಿಸಲಿದ್ದಾರೆ.

ಡಿ.4ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ಸೇರಿದಂತೆ ಒಟ್ಟು ಎಂಟು ಮಹತ್ವದ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿತ್ತು.