
ಕಾರವಾರ ತಾಲ್ಲೂಕಿನ ಸುಪ್ರಸಿದ್ಧ ಶ್ರೀ ಕೊಡಿಬೀರ ದೇವರ ವಾರ್ಷಿಕ ಜಾತ್ರಾಮಹೋತ್ಸವದ ಪ್ರಯುಕ್ತ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ರೂಪಾಲಿ ನಾಯ್ಕ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ರು.

ಬಳಿಕ ಸಕಲರ ಶ್ರೇಯೋಭಿವೃದ್ಧಿಗೆ ಪ್ರಾರ್ಥಿಸಲಾಯಿತು. ಈ ವೇಳೆ ಕಾರವಾರ ನಗರಸಭೆಯ ಮಾಜಿ ಅಧ್ಯಕ್ಷ ರವಿರಾಜ ಅಂಕೋಲೆಕರ ಹಾಗೂ ಅಪಾರ ಸಂಖ್ಯೆಯಲ್ಲಿ ಭಕ್ತರು ಉಪಸ್ಥಿತರಿದ್ದರು.
