ಜಮ್ಮು-ಕಾಶ್ಮೀರ; ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿಯಲ್ಲಿ ಪೊಲೀಸ್‌ ಹುತಾತ್ಮ

ಶ್ರೀನಗರ: ಉಧಂಪುರದಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಜಮ್ಮು ಮತ್ತು ಕಾಶ್ಮೀರಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪಿನ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ.

ಪೊಲೀಸ್ ಅಧಿಕಾರಿಯನ್ನು ಪೂಂಚ್ ಜಿಲ್ಲೆಯ ಮೆಂಧರ್ ನಿವಾಸಿ ಅಮ್ಜದ್ ಪಠಾಣ್ ಎಂದು ಗುರುತಿಸಲಾಗಿದೆ. ಉಧಂಪುರದ ಮಜಲ್ಟಾ ಪ್ರದೇಶದ ಸೋಹನ್ ಗ್ರಾಮದ ಬಳಿ ಸೋಮವಾರ ಮೂವರು ಭಯೋತ್ಪಾದಕರು ಅರಣ್ಯ ಪ್ರದೇಶದಲ್ಲಿ ಅಡಗಿರುವ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ಸಿಕ್ಕಿತ್ತು. ಇದರ ಬೆನ್ನಲ್ಲೇ ಎನ್‌ಕೌಂಟರ್ ಪ್ರಾರಂಭಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.