ರಾಜ್ಯದ ಹಲವು ಭಾಗಗಳಲ್ಲಿ ಚಳಿ ಅಬ್ಬರ

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಹಲವು ಭಾಗಗಳಲ್ಲಿ ಚಳಿಯ ಅಬ್ಬರ ಹೆಚ್ಚಾಗಿದೆ. ವಿಜಯಪುರ, ಬೀದರ್, ಶಿವಮೊಗ್ಗ, ಕಲಬುರಗಿ ಹಾಗೂ ಉತ್ತರಕನ್ನಡ ಸೇರಿದಂತೆ ಇನ್ನು ಹಲವು ಭಾಗಗಳಲ್ಲಿ , ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಹೆಚ್ಚಿದೆ.

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವೈದ್ಯರು ಜನರಿಗೆ ಬೆಚ್ಚಗಿನ ಉಡುಪು ಧರಿಸುವುದು, ಬಿಸಿ ನೀರು ಬಳಸುವುದು ಹಾಗೂ ಮುಂಜಾನೆ ಮತ್ತು ಸಂಜೆ ವಾಕಿಂಗ್‍ಗೆ ತೆರಳದಂತೆ ಸಲಹೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.