ಯಲ್ಲಾಪುರ: ಲಾರಿಯೊಂದು ಪಲ್ಟಿಯಾಗಿ, ಪಲ್ಟಿಯಾದ ಲಾರಿಗೆ ಕಾರು ಡಿಕ್ಕಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಅರಬೈಲ್ ಘಟ್ಟದಲ್ಲಿ ಸೋಮವಾರ ನಡೆದಿದೆ.
ಆಂಧ್ರದಿಂದ ಟೈಲ್ಸ್ ತುಂಬಿಕೊಂಡು ಮಂಗಳೂರು ಕಡೆಗೆ ಹೊರಟ ಸಂದರ್ಭದಲ್ಲಿ ಅರಬೈಲ್ ಘಟ್ಟದ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಆ ಲಾರಿಗೆ ಕಾರು ಗುದ್ದಿದೆ.
ಚಾಲಕ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಲಾರಿ ಸಂಪೂರ್ಣ ಜಖಂಗೊಂಡಿದ್ದು, ಟೈಲ್ಸ್ ಒಡೆದು ರಸ್ತೆಯ ಮೇಲೆ ಬಿದ್ದಿತ್ತು. ಅಪಘಾತದಿಂದ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಪೊಲೀಸರು ಸ್ಥಳಕ್ಕಾಗಮಿಸಿ, ಸಂಚಾರ ಸುಗಮಗೊಳಿಸಿದರು.