ನವದೆಹಲಿಗೆ ತೆರಳುತ್ತಿದ್ದ ರೈಲು ಬೆಳಗಿನ ಜಾವ 2.15 ರ ಸುಮಾರಿಗೆ ಅಪಘಾತಕ್ಕೀಡಾಗಿದೆ ಎಂದು NFR ವಕ್ತಾರರು ತಿಳಿಸಿದ್ದಾರೆ. ಹೊಜೈ ಜಿಲ್ಲೆಯ ಚಾಂಗ್ಜುರೈ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ ಎಂದು ನಾಗಾಂವ್ ವಿಭಾಗೀಯ ಅರಣ್ಯ ಅಧಿಕಾರಿ ಸುಹಾಶ್ ಕದಮ್ ಪಿಟಿಐಗೆ ತಿಳಿಸಿದ್ದಾರೆ. ಕದಮ್ ಮತ್ತು ಇತರ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ.

ಡಿಕ್ಕಿಯ ಪರಿಣಾಮ ಐದು ಬೋಗಿಗಳು ಮತ್ತು ರೈಲಿನ ಎಂಜಿನ್ ಹಳಿತಪ್ಪಿತು. ಆದರೆ, ಅಪಘಾತದಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ ಎಂದು ಈಶಾನ್ಯ ಗಡಿನಾಡು ರೈಲ್ವೆ (ಎನ್‌ಎಫ್‌ಆರ್) ವಕ್ತಾರರು ತಿಳಿಸಿದ್ದಾರೆ.
