ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್ಗಳಾಗಿ ವಿಂಗಡಿಸಲಾಗಿದೆ. ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಭಾರತ ತಂಡವು ಇದೀಗ ಬಲಿಷ್ಠ ಪಡೆಯನ್ನು ಘೋಷಿಸಿದೆ.

ಬಹುನಿರೀಕ್ಷಿತ ಟಿ20 ವಿಶ್ವಕಪ್‌ಗಾಗಿ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಉಪನಾಯಕನಾಗಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ಟೂರ್ನಿಯಿಂದ ಶುಭ್ಮನ್ ಗಿಲ್ ಅವರನ್ನು ಕೈ ಬಿಡಲಾಗಿದೆ.
ಟಿ20 ವಿಶ್ವಕಪ್ನಲ್ಲಿ ಭಾರತ ತಂಡವು ಫೆಬ್ರವರಿ 7 ರಿಂದ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ಯುಎಸ್ಎ ತಂಡವನ್ನು ಎದುರಿಸಲಿದೆ. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಫೆಬ್ರವರಿ 15 ರಂದು ತನ್ನ ಬದ್ಧ ವೈರಿ ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯಕ್ಕೆ ಕೊಲೊಂಬೊದ ಆರ್. ಪ್ರೇಮದಾಸ ಸ್ಟೇಡಿಯಂ ಆತಿಥ್ಯವಹಿಸಲಿದೆ. ಅದರಂತೆ ಟಿ20 ವಿಶ್ವಕಪ್ಗೆ ಭಾರತ ತಂಡ ಹಾಗೂ ಟೀಮ್ ಇಂಡಿಯಾದ ವೇಳಾಪಟ್ಟಿ ಈ ಕೆಳಗಿನಂತಿದೆ…
ಟಿ20 ವಿಶ್ವಕಪ್ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.
