ದೆಹಲಿ, ಡಿಸೆಂಬರ್ 21: ಮೊಟ್ಟೆ ತಿನ್ನುವುದರಿಂದ ಕ್ಯಾನ್ಸರ್ ಬರುತ್ತೆ ಎನ್ನುವ ವರದಿಗಳನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಆಧಾರ ರಹಿತ ಎಂದು ತಳ್ಳಿ ಹಾಕಿದೆ. ಸದ್ಯ ದೇಶದಲ್ಲಿರುವ ಮೊಟ್ಟೆಗಳು ಸೇವನೆಗೆ ಸುರಕ್ಷಿತವಾಗಿವೆ ಎಂದು ಸ್ಪಷ್ಟನೆ ನೀಡಿದೆ. ಆ ಮೂಲಕ ಜನರ ಗೊಂದಲಗಳಿಗೆ ತೆರೆ ಎಳೆಯಲಾಗಿದೆ.

ಈ ಕುರಿತಾಗಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಶನಿವಾರ ಮಾಧ್ಯಮ ಪ್ರಕರಣೆ ಹೊರಡಿಸಿದ್ದು, ಮೊಟ್ಟೆ ತಿನ್ನುವುದರಿಂದ ಕ್ಯಾನ್ಸರ್ ಬರುತ್ತೆ ಎನ್ನುವ ವರದಿಗಳು ಅವೈಜ್ಞಾನಿಕವಾಗಿದ್ದು, ದಾರಿತಪ್ಪಿಸುವ ಮೂಲಕ ಸಾರ್ವಜನಿಕರಲ್ಲಿ ಅನಗತ್ಯ ಆತಂಕ ಉಂಟು ಮಾಡುತ್ತಿದ್ದು, ಅಂತಹ ವರದಿಗಳನ್ನು ನಂಬದಂತೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಹೇಳಿದೆ.

