ಹೊನ್ನಾವರ: ಕಳೆದ ನಾಲ್ಕು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಮಂಕಿ ಪಟ್ಟಣ ಪಂಚಾಯಿತಿಗೆ ರವಿವಾರ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ.

ಪಟ್ಟಣದ ಒಟ್ಟು 20 ವಾರ್ಡ್‌ಗಳ ಪೈಕಿ ಎರಡು ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದರಿಂದ, ಉಳಿದ 18 ವಾರ್ಡ್‌ಗಳಿಗೆ ಮತದಾನ ನಡೆದಿತ್ತು. ಒಟು 20 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನ ಪಡೆಯುವುದರ ಮೂಲಕ ತನ್ನ ತೆಕ್ಕೆಗೆ ಬಾಚಿಕೊಂಡಿದೆ. ಇನ್ನು ಕಾಂಗ್ರೆಸ್ 8 ಸ್ಥಾನಗಳನ್ನು ಪಡೆದಿದ್ದು, ಅದರಲ್ಲಿ 2 ಅವಿರೋಧವಾಗಿ ಆಯ್ಕೆಯಾಗಿದ್ದಾರೆ.. ಇನ್ನೂ ಫಲಿತಾಂಶ ಹೊರಬೀಳುತ್ತಿದ್ದಂತೆ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತ್ತು.
