ಮಾಸ್ಕೋ: ರಷ್ಯಾದ ಫೆಡರಲ್ ಸೆಕ್ಯುರಿಟಿ ಸರ್ವೀಸ್ (ಎಫ್ ಎಸ್ ಬಿ) ಸೋಮವಾರ ಇಸ್ಲಾಮಿಕ್ ಸ್ಟೇಟ್ ಆತ್ಮಾಹುತಿ ದಾಳಿಕೋರನನ್ನು ಬಂಧಿಸಿದ್ದಾರೆ. ಆತ ಭಾರತದ ಪ್ರಮುಖ ನಾಯಕನ ಹತ್ಯೆಗೆ ಸಂಚು ರೂಪಿಸಿದ್ದ ಎನ್ನಲಾಗಿದೆ.
ರಷ್ಯಾದಲ್ಲಿ ಇಸ್ಲಾಮಿಕ್ ಸ್ಟೇಟ್ ನಿಷೇಧಿತ ಉಗ್ರ ಸಂಘಟನೆಯಾಗಿದ್ದು, ಬಂಧಿತ ಉಗ್ರ ತನ್ನನ್ನು ತಾನು ಸ್ಫೋಟಿಸಿಕೊಳ್ಳುವ ಮೂಲಕ ಭಾರತದ ಆಡಳಿತ ಪಕ್ಷದ ಪ್ರಮುಖನೋರ್ವನನ್ನು ಹತ್ಯೆ ಮಾಡುವ ಯೋಜನೆ ಹೊಂದಿದ್ದ ಎಂದು ಎಫ್‌ಎಸ್ ಬಿ ಸಂಸ್ಥೆ ತಿಳಿಸಿದೆ.
ಬಂಧಿತ ಉಗ್ರನನ್ನು ಐಎಸ್ ನಾಯಕರು ಆತ್ಮಾಹುತಿ ಬಾಂಬರ್ ಆಗಿ ಟರ್ಕಿಯಲ್ಲಿ ನೇಮಿಸಿಕೊಂಡಿದ್ದರು ಎಂಬ ಮಾಹಿತಿ ತಿಳಿದುಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನೂ ತಿಳಿದು ಬಂದಿಲ್ಲ.