
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕ ಬಸವಂತ ಕಡೋಲ್ಕರ್ (32) ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಗರದ ಕ್ಲಬ್ ರಸ್ತೆಯಲ್ಲಿ ನಡೆದಿದೆ. ಬೈಕ್‌ನಲ್ಲಿ ಬಂದ ಇಬ್ಬರು ಆರೋಪಿಗಳು ಎದೆ, ಭುಜ ಹಾಗೂ ತೊಡೆ ಸೇರಿ ನಾಲ್ಕು ಕಡೆ ಚಾಕು ಇರಿದು ಪರಾರಿಯಾಗಿದ್ದಾರೆ. ಮೈನಿಂಗ್ ವಿಚಾರಕ್ಕೆ ಹಲ್ಲೆ ನಡೆದಿದೆ ಎನ್ನಲಾಗಿದೆ.
ಘಟನೆಯ ವೇಳೆ ಸ್ಥಳದಲ್ಲೇ ಇದ್ದ ಐಪಿಎಸ್ ಅಧಿಕಾರಿ ರವೀಂದ್ರ ಗಡಾದಿ ಸಮಯಕ್ಕೆ ಸರಿಯಾಗಿ ಹಸ್ತಕ್ಷೇಪ ಮಾಡಿ ಬಸವಂತನ ಜೀವ ಉಳಿಸಿದ್ದಾರೆ. ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಕೃತ್ಯದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕ್ಯಾಂಪ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
