ಕಾರವಾರ: ಗ್ರಾಮೀಣ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಕಾರ್ಯಕಾರಣಿ ಸಭೆ ಹಮ್ಮಿಕೊಳ್ಳಲಾಗಿತ್ತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಗ್ರಾಮೀಣ ಮಂಡಲ ಅಧ್ಯಕ್ಷ ಸುಭಾಷ ಗುನಗಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಭಾರಿ ಅನುರಾಧಾ ನಾಯ್ಕ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಾಲಾ ಹುಲಸ್ವಾರ್ ಮಹಿಳಾ ಮೋರ್ಚಾ ಸಂಘಟನೆಯಲ್ಲಿ ಜಿಲ್ಲೆಗೆ ಮಾದರಿಯಾಗಿದ್ದಾರೆ. ನಮ್ಮ ಕ್ಷೇತ್ರದ ಶಾಸಕರು ಕ್ಷೇತ್ರದ ಅಭಿವೃದ್ಧಿ ಸಲುವಾಗಿ ನಿರಂತರ ದುಡಿಯುತ್ತಿದ್ದಾರೆ. ಇಂದು ಮಹಿಳಾ ಮೋರ್ಚಾದವರು ಪಕ್ಷದ ಯಾವುದೇ ಕಾರ್ಯಕ್ರಮವನ್ನು ಮಾಡಿದಾಗ ಪಕ್ಷದ ಸಂಘಟನೆ ಸಲುವಾಗಿ ಸಮಯವನ್ನು ನೀಡುತ್ತಿರುವುದು ಶ್ಲಾಘನೀಯ. ಇವರ ಕಾರ್ಯ ವೈಖರಿ ನೋಡಿ ನಮಗೆ ಹೆಮ್ಮೆಯ ವಿಷಯವಾಗಿದೆ ಮುಂದಿನ ದಿನಗಳಲ್ಲಿ ಚುನಾವಣೆಯ ದಿನವಾಗಿದ್ದು ಮತ್ತಷ್ಟು ಸಂಘಟನೆಯ ಬಗ್ಗೆ ಒತ್ತಡ ಎಲ್ಲರೂ ನೀಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ವಂದನಾ ಶಿರೋಡ್ಕರ್, ಗ್ರಾಮೀಣ ಮಂಡಲ ಪ್ರಧಾನ ಕಾರ್ಯದರ್ಶಿ ಸುಜಾತಾ ಬಾಂದೇಕರ್, ವಿಜಯಾ ಗುನಗಿ,ದೀಪಾ ಆಗೇರ್ ಹಾಗೂ ಇನ್ನಿತರ ಸದಸ್ಯರು ಉಪಸ್ಥಿತರಿದ್ದರು.