
ಹೊನ್ನಾವರ ಜ.23 : ತಾಲೂಕಿನ ಖಂಡೋಡಿಯಲ್ಲಿ ಶ್ರೀ ಮಹಾವಿಷ್ಣು ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘ ಮತ್ತು ಊರ ನಾಗರಿಕರ ಸಂಯುಕ್ತ ಆಶ್ರಯದಲ್ಲಿ ಜ.25 ರಂದು ಮರಾಠಿ ಸಮಾಜದ ಹಾಗೂ ನಗರಬಸ್ತಿಕೇರಿ ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಸಮಾಜ ಬಾಂಧವರಿಗಾಗಿ 7ನೇ ವರ್ಷದ ಹೊನಲು ಬೆಳಕಿನ ಮ್ಯಾಟ್ ಕಬ್ಬಡ್ಡಿ ಪಂದ್ಯಾವಳಿ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಪ್ರಥಮ ಬಹುಮಾನ 10001 ಹಾಗೂ ಟ್ರೋಫಿ, ದ್ವೀತಿಯ ಬಹುಮಾನ 8001 ಮತ್ತು ಟ್ರೋಫಿ, ತೃತೀಯ ಬಹುಮಾನ, 6001 ಮತ್ತು ನಾಲ್ಕನೇ ಬಹುಮಾನವಾಗಿ 4001 ಮತ್ತು ಟ್ರೋಫಿ ಜೊತೆಗೆ ಉತ್ತಮ ರೈಡರ್ ಹಾಗೂ ಉತ್ತಮ ಡಿಫೆಂಡರ್ ಪ್ರಶಸ್ತಿ ನೀಡಲಾಗುವುದು.

2024-25ನೇ ಸಾಲಿನ ಸ್ನಾತಕೋತ್ತರ ಪದವಿಯಲ್ಲಿ ಶೇ. 70 ಕ್ಕಿಂತ ಹೆಚ್ಚು ಅಂಕ, ಪಿಯುಸಿಯಲ್ಲಿ ಶೇ. 80 ಅಂಕ ಮತ್ತು ಎಸ್ಸೆಸ್ಸೆಲ್ಸಿಯಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕ ಪಡೆದ ಹೊನ್ನಾವರ ತಾಲೂಕ ವ್ಯಾಪ್ತಿಯ ಮರಾಠಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ಜೊತೆಗೆ ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ…
ಮಧ್ಯಾಹ್ನ 2ಗಂಟೆಯಿಂದ 3 ಗಂಟೆಯವರೆಗೆ ಖಂಡೋಡಿ ಗ್ರಾಮದ ಎಲ್ಲಾ ಸಮುದಾಯದ ಮಹಿಳೆಯರಿಗೆ ಮತ್ತು ವಿದ್ಯಾರ್ಥಿಗಳಿಗಾಗಿ ಲಿಂಬು ಚಮಚ ಸ್ಪರ್ಧೆ, ರಂಗೋಲಿ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಸಂಜೆ 4ರಿಂದ 5ಗಂಟೆಯವರೆಗೆ ಖಂಡೋಡಿ ಗ್ರಾಮದ ವಿದ್ಯಾರ್ಥಿಗಳಿಂದ ಮನೊರಂಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
