India U19 Wins Record 6th World Cup:ಜಿಂಬಾಬ್ವೆಯ ಹರಾರೆಯಲ್ಲಿ ನಡೆದ ಅಂಡರ್ 19 ವಿಶ್ವಕಪ್ ಫೈನಲ್‌ನಲ್ಲಿ ಇಂಗ್ಲೆಂಡ್ ಅನ್ನು 100 ರನ್‌ಗಳಿಂದ ಸೋಲಿಸಿ ಭಾರತ ಇತಿಹಾಸ ನಿರ್ಮಿಸಿದೆ. ಇದು ಭಾರತದ 6ನೇ ಅಂಡರ್ 19 ವಿಶ್ವಕಪ್ ಪ್ರಶಸ್ತಿಯಾಗಿದೆ. ಕೇವಲ 14 ವರ್ಷದ ವೈಭವ್ ಸೂರ್ಯವಂಶಿ ಅವರ ಬಿರುಸಿನ 175 ರನ್ (80 ಎಸೆತ) ಗಳಿಕೆಯು ಭಾರತದ ಗೆಲುವಿಗೆ ಪ್ರಮುಖ ಕಾರಣವಾಯಿತು.

ಜಿಂಬಾಬ್ವೆಯ ಹರಾರೆ ಮೈದಾನದಲ್ಲಿ ಯುವ ಭಾರತ ತಂಡ ಇತಿಹಾಸ ಸೃಷ್ಟಿಸಿದೆ. ಅಂಡರ್ 19 ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡವನ್ನು ಬರೋಬ್ಬರಿ 100 ರನ್‌ಗಳಿಂದ ಸೋಲಿಸಿತು. ಇದರೊಂದಿಗೆ, ಭಾರತ ಆರನೇ ಬಾರಿಗೆ ಅಂಡರ್ 19 ವಿಶ್ವಕಪ್ ಎತ್ತಿಹಿಡಿಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 411 ರನ್ ಕಲೆಹಾಕಿತು.

ಇದಕ್ಕೆ ಉತ್ತರವಾಗಿ ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡವು 311 ರನ್ಗಳಿಗೆ ಆಲೌಟ್ ಆಗುವ ಮೂಲಕ 100 ರನ್‌ಗಳಿಂದ ಸೋಲೊಪ್ಪಿಕೊಂಡಿತು. ಭಾರತದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ 14 ವರ್ಷದ ವೈಭವ್ ಸೂರ್ಯವಂಶಿ ಕೇವಲ 80 ಎಸೆತಗಳಲ್ಲಿ 175 ರನ್ಗಳ ಬಿರುಗಾಳಿಯ ಇನ್ನಿಂಗ್ಸ್ ಆಡಿದರು. ವೈಭವ್ ಅವರ ಈ ಇನ್ನಿಂಗ್ಸ್‌ನಲ್ಲಿ 15 ಸಿಕ್ಸರ್‌ಗಳು ಮತ್ತು 15 ಬೌಂಡರಿಗಳು ಸೇರಿದ್ದವು.
