ಕರ್ನಾಟಕದಲ್ಲಿ ಹವಾಮಾನ ಬದಲಾವಣೆ: ರಾಜ್ಯದ ಹಲವೆಡೆ ಒಣಹವೆ

ಕಳೆದ ಹಲವಾರು ದಿನಗಳಿಂದ ರಾಜ್ಯಾದ್ಯಂತ ಒಣ ಹವೆಯ ವಾತಾವರಣ ಆವರಿಸಿಕೊಂಡಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಸ್ವಲ್ಪ ಸುಧಾರಣೆ ಕಂಡುಬಂದಿದೆ.

ಕರಾವಳಿ, ಮಲೆನಾಡು ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಮೂರು ದಿನಗಳವರೆಗೆ ಇದೇ ರೀತಿಯ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಹತ್ತಾರು ದಿನಗಳಿಂದ ರಾಜ್ಯದಾದ್ಯಂತ ಒಣ ಹವಾಮಾನ ಆವರಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ ಚಳಿಯ ತೀವ್ರತೆ ಇಂದು ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಆದರೆ ಕರಾವಳಿ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ತೀವ್ರ ಚಳಿಯೊಂದಿಗೆ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ.

ಎಲ್ಲೆಲ್ಲಿ ಒಣಹವೆ?

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಮೈಸೂರು , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ , ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆ ಆವರಿಸಿದೆ.