ರಾಜ್ಯದ ಹಲವೆಡೆ ವಾಯು ಗುಣಮಟ್ಟ ಕುಸಿತ; ಉಡುಪಿ, ಮಂಗಳೂರಿಗೂ ಪರಿಣಾಮ

ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಮತ್ತಷ್ಟು ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಾಜ್ಯದ ಇನ್ನೂ ಹಲವು ನಗರಗಳಲ್ಲೂ ವಾಯು ಗುಣಮಟ್ಟ ಕುಸಿತ ಕಂಡುಬಂದಿದೆ. ಕಲಬುರ್ಗಿಯಲ್ಲಿ ತೀರಾ ಕಳಪೆ ಗಾಳಿಯ ಗುಣಮಟ್ಟ ದಾಖಲಾಗಿದ್ದು, ಬೆಂಗಳೂರಿನ AQI ಅಪಾಯಕಾರಿ ಮಟ್ಟ ತಲುಪಿದೆ. ಇದರಿಂದ ಶ್ವಾಸಕೋಶ ಸಂಬಂಧಿತ ಕಾಯಿಲೆಗಳು ಹೆಚ್ಚುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

 ಬೆಂಗಳೂರು :

ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 161ಕ್ಕೆ ತಲುಪಿದೆ. ಕೆಲ ದಿನಗಳಿಂದ ಉಡುಪಿ, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಏರ್ ಕ್ವಾಲಿಟಿ ತೀರಾ ಕಳಪೆ ಮಟ್ಟಕ್ಕೆ ಇಳಿದಿತ್ತು. ಆದರೆ ಇಂದು ಅದೇ ಉಡುಪಿ, ಮಂಗಳೂರು, ಕಲಬುರ್ಗಿ ಸೇರಿದಂತೆ ಹಲವೆಡೆಯ ವಾಯು ಗುಣಮಟ್ಟ 150ಕ್ಕಿಂತ ಹೆಚ್ಚಾಗಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –161
  • ಮಂಗಳೂರು-158
  • ಮೈಸೂರು –158
  • ಬೆಳಗಾವಿ – 159
  • ಕಲಬುರ್ಗಿ-150
  • ಶಿವಮೊಗ್ಗ – 176
  • ಬಳ್ಳಾರಿ – 166
  • ಹುಬ್ಬಳ್ಳಿ- 161
  • ಉಡುಪಿ –158
  • ವಿಜಯಪುರ –150

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+