ನವದೆಹಲಿ:
ಕಾಳ ಸಂತೆಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಮಾರಾಟವನ್ನು ತಡೆಗಟ್ಟುವ ಉದ್ದೇಶದಿಂದ ಕೇಂದ್ರ ಸರ್ಕಾರವು ಎಲ್‌ಪಿಜಿ ಸಿಲಿಂಡರ್‌ಗಳ ಕನಿಷ್ಠ ಬುಕ್ಕಿಂಗ್ ಅವಧಿಯನ್ನು 21 ದಿನಗಳಿಂದ 25 ದಿನಗಳಿಗೆ ಹೆಚ್ಚಿಸಿದೆ.
ಇದಕ್ಕೂ ಮೊದಲು ಗ್ರಾಹಕರು ಸುಮಾರು 55 ದಿನಗಳ ಅಂತರದಲ್ಲಿ ಸಿಲಿಂಡರ್ ಬುಕ್ ಮಾಡುತ್ತಿದ್ದರೆ, ಇರಾನ್ ಯುದ್ಧದ ಬಳಿಕ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಕೇವಲ 15 ದಿನಗಳ ಅಂತರದಲ್ಲೇ ಬುಕ್ಕಿಂಗ್ ಮಾಡಲಾಗುತ್ತಿದೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಕಾಳ ಸಂತೆಯಲ್ಲಿನ ಮಾರಾಟವನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಎಲ್‌ಪಿಜಿ ಉತ್ಪಾದನೆಯನ್ನು ಹೆಚ್ಚಿಸಲು ಸಂಸ್ಕರಣಾಗಾರಗಳಿಗೆ ಸೂಚಿಸಿದ ಕೇಂದ್ರ ಸರ್ಕಾರ ವಾಣಿಜ್ಯ ಸಂಪರ್ಕಗಳಿಗಿಂತ ಗೃಹಬಳಕೆಯ ಎಲ್‌ಪಿಜಿಗೆ ಆದ್ಯತೆ ನೀಡುವಂತೆ ಆದೇಶಿಸಿದೆ. ಅಲ್ಜೀರಿಯಾ, ಆಸ್ಟ್ರೇಲಿಯಾ, ಕೆನಡಾ, ನಾರ್ವೆಯಂತಹ ದೇಶಗಳು ಭಾರತಕ್ಕೆ ಎಲ್‌ಪಿಜಿ ಮಾರಾಟ ಮಾಡಲು ಮುಂದಾಗಿವೆ. ಕಚ್ಚಾ ತೈಲ ಬೆಲೆಗಳು ಬ್ಯಾರೆಲ್‌ಗೆ 130 ಡಾಲರ್‌ಗಳನ್ನು ತಲುಪದ ಹೊರತು ಮತ್ತು ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೆಚ್ಚಾಗುವ ಸಾಧ್ಯತೆಯಿಲ್ಲ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಮಾ.7 ರಂದು ಕೇಂದ್ರ ಸರ್ಕಾರಿ ಸ್ವಾಮ್ಯದ ಕಂಪನಿಗಳು ಗೃಹ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ದರ 60 ರೂ. ಏರಿಸಿದ್ದರೆ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರ 115 ರೂ. ಏರಿಕೆ ಮಾಡಿದೆ.
