ಮೂಲಸೌಕರ್ಯ ವಂಚಿತ ಗ್ರಾಮಗಳಲ್ಲಿ ಜನಜಾಗೃತಿ ಉದ್ದೇಶದಿಂದ ‘ಹಳ್ಳಿಕಡೆ ನಡಿಗೆ’

ಶಿರಸಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಗ್ರಾಮೀಣ ಭಾಗದ ಪ್ರಮುಖ ಸಮಸ್ಯೆಗಳನ್ನ ಸರಕಾರದ ಗಮನ ಸೆಳೆಯುವ ಉದ್ದೇಶದಿಂದ, 75 ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಭೂಮಿ ಹಕ್ಕು, ಮೂಲ ಸೌಕರ್ಯಕ್ಕಾಗಿ ಹಳ್ಳಿ ಕಡೆ ನಡಿಗೆ ಕಾರ್ಯಕ್ರಮವನ್ನ ಜಿಲ್ಲಾದ್ಯಂತ ಒಂದು ವರ್ಷದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವಿಂದ್ರ ನಾಯ್ಕ ತಿಳಿಸಿದ್ದಾರೆ.

ಇಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಕಾರ್ಯಾಲಯದಲ್ಲಿ ವಿವಿಧ ಸಂಘಟನೆಗಳ ಹಾಗೂ ಸಾಮಾಜಿಕ ಹೋರಾಟಗಾರರ ಮುಖಂಡರೊಂದಿಗೆ ‘ಹಳ್ಳಿಕಡೆ ನಡಿಗೆ’ ಲಾಂಛನವನ್ನ ಬಿಡುಗಡೆ ಮಾಡುತ್ತಾ ಕಾರ್ಯಕ್ರಮದ ವಿವರವನ್ನ ತಿಳಿಸಿದರು. ಜಿಲ್ಲಾದ್ಯಂತ ವಿವಿಧ ತಾಲೂಕಿನ 75 ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಒಂದು ವರ್ಷ ನಿರಂತರ ಹಳ್ಳಿಕಡೆ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಉತ್ತರ ಕನ್ನಡ ಜಿಲ್ಲೆಯು ನಿರಾಶ್ರಿತರರ ಸಮಸ್ಯೆ, ರಸ್ತೆಯ ಸಮಸ್ಯೆ, ಶೌಚಾಲಯ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ, ಕಾಲುಸಂಕ, ಸೇತುವೆ, ವಿದ್ಯಾರ್ಥಿಗಳಿಗೆ ಬಸ್ ಅವ್ಯವಸ್ಥೆ ಮುಂತಾದ ಸಮಸ್ಯೆಗಳನ್ನು ಎದುರಿಸುತ್ತಿದೆ ಹೀಗಾಗಿ ಸೌಕರ್ಯ ವಂಚಿತ ಪ್ರದೇಶಗಳಲ್ಲಿ ನಡಿಗೆ ಮೂಲಕ ಜನಜಾಗೃತಿ ಮಾಡುವ ಉದ್ದೇಶದಿಂದ ‘ಹಳ್ಳಿಕಡೆ ನಡಿಗೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು

ವಿವಿಧ ಸಂಘಟನೆಗಳ ಪ್ರಮುಖರಾದ ಲಕ್ಷ ಮಾಳ್ಳಕ್ಕನವರ, ರಾಜು ನರೇಬೈಲ್, ಉದಯ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.