ಹೊನ್ನಾವರ:
ತಾಲ್ಲೂಕಿನ ಹೆರಂಗಡಿ ಗ್ರಾಮದ ಕಳಿಮಠ ಶ್ರೀ ಶಂಭುಲಿಂಗೇಶ್ವರ ದೇವಸ್ಥಾನದ ವರ್ಧಂತಿ ಮಹೋತ್ಸವ ದಿನಾಂಕ 20-03-2026 ರಿಂದ 21-03-2026 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ.

ಎರಡು ದಿನಗಳ ಕಾಲ ದೇವಸ್ಥಾನದಲ್ಲಿ ಪೂಜೆ, ಹೋಮ – ಹವನಗಳೊಂದಿಗೆ ಮಂಗಳಾರತಿ ಮತ್ತಿತರ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲಾಗುತ್ತದೆ.

ದೇವಾಲಯದ ಆವರಣವನ್ನು ವಿದ್ಯುತ್ ದೀಪಗಳು ಹಾಗೂ ವಿವಿಧ ಹೂವುಗಳಿಂದ ಅಲಂಕರಿಸಲಾಗಿದೆ. ಭಕ್ತರು, ಗ್ರಾಮದ ಮುಖಂಡರು ಸೇರಿದಂತೆ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ದಿನಾಂಕ 21-03-2026 ಶನಿವಾರ ಮಧ್ಯಾಹ್ನ ಮಹಾ ಪೂಜೆಯ ನಂತರ ಅನ್ನಸಂತರ್ಪಣೆ ನಡೆಯಯಲಿದೆ. ಹಾಗೆಯೇ ರಾತ್ರಿ 10 ಗಂಟೆಗೆ ಶ್ರೀ ಕ್ಷೇತ್ರ ಇಡಗುಂಜಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ಕುಳಿಮನೆ ಇವರಿಂದ ವೀರ ಚಂದ್ರಹಾಸ ಯಕ್ಷಗಾನ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.


