ಹೊನ್ನಾವರ :
ತಾಲೂಕಿನ ಹಳದೀಪುರ ಅಗ್ರಹಾರ ಸಮೀಪ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.

ನವಿಲಗೋಣ ಗ್ರಾಮದ ಚಿಪ್ಪಿಹಕ್ಕಲ್ ನಿವಾಸಿ ವೆಂಕಟೇಶ ಗೋಪಾಲಕೃಷ್ಣ ವೈದ್ಯ ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ. ಅಡುಗೆ ಕೆಲಸ ಮಾಡುತ್ತಿದ್ದ ಇವರು, ಮನೆಯಿಂದ ಹಳದೀಪುರಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಬೈಕ್ ಸವಾರ ಹೆಲ್ಮೆಟ್ ಧರಿಸದ ಕಾರಣ ತಲೆ ಭಾಗಕ್ಕೆ ಗಂಭೀರ ಗಾಯಗೊಂಡು ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತು ಹೊನ್ನಾವರ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.
