ರಂಗು-ರಂಗಿನ ಕ್ರಿಕೆಟ್ ಹಬ್ಬ ಇಂಡಿಯನ್ ಪ್ರೀಮಿಯರ್ ಲೀಗ್ ಇಂದಿನಿಂದ ಆರಂಭವಾಗುತ್ತಿದೆ. ಉದ್ಘಾಟನಾ ಪಂದ್ಯವು ಬೆಂಗಳೂರಿನಲ್ಲಿ ನಡೆಯಲಿದ್ದು, ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿವೆ. ಆದರೆ ಈ ಮಹತ್ವದ ಪಂದ್ಯಕ್ಕೆ ಆರ್‌ಸಿಬಿ ತಂಡದ ಪ್ರಮುಖ ಮೂವರು ವೇಗದ ಬೌಲರ್‌ಗಳು ಅಲಭ್ಯರಾಗಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ.

IPL 2026 :
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರ ಮೊದಲ ಪಂದ್ಯದಲ್ಲೇ ಕಣಕ್ಕಿಳಿಯುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಅಭಿಯಾನ ಶುರು ಮಾಡಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಮಾ.8) ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ಮೂಲಕ ಆರ್‌ಸಿಬಿ ಪರ ಇಬ್ಬರು ಆಟಗಾರರು ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ.
ಏಕೆಂದರೆ ಮೊದಲ ಪಂದ್ಯಕ್ಕೆ ಆರ್‌ಸಿಬಿ ತಂಡದ ಮೂವರು ಆಟಗಾರರು ಅಲಭ್ಯರಾಗಿದ್ದಾರೆ. ಇಲ್ಲಿ ಜೋಶ್ ಹೇಝಲ್ವುಡ್ ಫಿಟ್ನೆಸ್ ಕಾರಣದಿಂದಾಗಿ ಹೊರಗುಳಿದರೆ, ಯಶ್ ದಯಾಳ್ ವೈಯುಕ್ತಿಕ ಕಾರಣಗಳಿಂದಾಗಿ ಇಡೀ ಟೂರ್ನಿಗೆ ಅಲಭ್ಯರಾಗಿದ್ದಾರೆ. ಇನ್ನು ಮತ್ತೋರ್ವ ವೇಗಿ ನುವಾನ್ ತುಷಾರ ಗಾಯದ ಸಮಸ್ಯೆಯ ಕಾರಣ ಇನ್ನೂ ಕೂಡ ಆರ್‌ಸಿಬಿ ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ಈ ಮೂವರು ಮೊದಲ ಪಂದ್ಯದಲ್ಲಿ ಕಾಣಿಸಿಕೊಳ್ಳುವುದಿಲ್ಲ.
ಇತ್ತ ಈ ಮೂವರಲ್ಲಿ ಜೋಶ್ ಹೇಝಲ್ವುಡ್ ಹಾಗೂ ಯಶ್ ದಯಾಳ್ ಆರ್‌ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ನ ಖಾಯಂ ಸದಸ್ಯರಾಗಿದ್ದರು. ಅಂದರೆ ಕಳೆದ ಬಾರಿಯ ಫೈನಲ್ನಲ್ಲಿ ಕಣಕ್ಕಿಳಿದಿದ್ದ ಆಟಗಾರರು. ಇದೀಗ ಅವರ ಅನುಪಸ್ಥಿತಿಯಲ್ಲಿ ಆರ್‌ಸಿಬಿ ಇಬ್ಬರು ಹೊಸ ಮುಖಗಳಿಗೆ ಚಾನ್ಸ್ ನೀಡುವ ಸಾಧ್ಯತೆ ಹೆಚ್ಚಿದೆ.ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ನುವಾನ್ ತುಷಾರ, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಕಾನಿಷ್ಕ್ ಚೌಹಾನ್, ಯಶ್ ದಯಾಳ್ (ಅಲಭ್ಯ).
ಜೇಕಬ್ ಡಫಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೊಸದಾಗಿ ಆಯ್ಕೆಯಾಗಿರುವ ನ್ಯೂಝಿಲೆಂಡ್ ವೇಗಿ ಜೇಕಬ್ ಡಫಿ ಮೊದಲ ಪಂದ್ಯದ ಮೂಲಕ ಪಾದಾರ್ಪಣೆ ಮಾಡುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಜೋಶ್ ಹೇಝಲ್ವುಡ್ ಬದಲಿಯಾಗಿ ಡಫಿ ಅಲ್ಲದೆ ಮತ್ತೋರ್ವ ವಿದೇಶಿ ವೇಗಿ ತಂಡದಲ್ಲಿಲ್ಲ. ಹೀಗಾಗಿ ಡಫಿಗೆ ಇಂದು ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚು.
ಮಂಗೇಶ್ ಯಾದವ್: ಯಶ್ ದಯಾಳ್ ಟೂರ್ನಿಯಿಂದ ಹೊರಗುಳಿದಿರುವ ಆಟಗಾರ ಆರ್‌ಸಿಬಿ ಮಂಗೇಶ್ ಯಾದವ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಏಕೆಂದರೆ ಮಂಗೇಶ್ ಇತ್ತೀಚಿನ ಅಭ್ಯಾಸ ಪಂದ್ಯಗಳಲ್ಲಿ ಗಮನಾರ್ಹ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಇಂದಿನ ಮ್ಯಾಚ್ನಲ್ಲಿ ಮಂಗೇಶ್ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ.
ಹೇಗಿರಲಿದೆ ಆರ್‌ಸಿಬಿ ಪ್ಲೇಯಿಂಗ್ 11?
- ವಿರಾಟ್ ಕೊಹ್ಲಿ
- ಫಿಲ್ ಸಾಲ್ಟ್
- ರಜತ್ ಪಾಟಿದಾರ್ (ನಾಯಕ)
- ಟಿಮ್ ಡೇವಿಡ್
- ಜಿತೇಶ್ ಶರ್ಮಾ (ವಿಕೆಟ್ ಕೀಪರ್)
- ರೊಮಾರಿಯೊ ಶೆಫರ್ಡ್
- ಕೃನಾಲ್ ಪಾಂಡ್ಯ
- ಭುವನೇಶ್ವರ್ ಕುಮಾರ್
- ಜೇಕಬ್ ಡಫಿ
- ಮಂಗೇಶ್ ಯಾದವ್
- ಸುಯಶ್ ಶರ್ಮಾ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ನುವಾನ್ ತುಷಾರ, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಕಾನಿಷ್ಕ್ ಚೌಹಾನ್, ಯಶ್ ದಯಾಳ್ (ಅಲಭ್ಯ).
