ಕರ್ನಾಟಕ ಪ್ರಥಮ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆಯನ್ನು ಬಳಸಿ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಸುಲಭವಾಗಿ ವೀಕ್ಷಿಸಬಹುದು. ಜೊತೆಗೆ, ನೇರ ಲಿಂಕ್ ಮೂಲಕವೂ ಫಲಿತಾಂಶ ಪರಿಶೀಲನೆಗೆ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಕಾಲೇಜುಗಳಲ್ಲಿಯೂ ಫಲಿತಾಂಶ ತಿಳಿದುಕೊಳ್ಳಬಹುದು.

ಕರ್ನಾಟಕ ರಾಜ್ಯಾದ್ಯಂತ 2026ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ 2026ನೇ ಸಾಲಿನ ಪ್ರಥಮ ಪಿಯುಸಿ (1st PUC) ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಇಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ಪರೀಕ್ಷೆಗೆ ಹಾಜರಾಗಿದ್ದ ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶವನ್ನು ಆನ್‌ಲೈನ್ ಮೂಲಕ ವೀಕ್ಷಿಸಬಹುದಾಗಿದೆ.
ಫಲಿತಾಂಶ ಪ್ರಕಟಣೆಯಲ್ಲಿ ಬದಲಾವಣೆ
ಈ ಬಾರಿ ಫಲಿತಾಂಶ ಪ್ರಕಟಿಸುವ ವಿಧಾನದಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದ್ದು, ಎಲ್ಲ ವಿದ್ಯಾರ್ಥಿಗಳಿಗೆ ಒಂದೇ ವೇಳೆ ಫಲಿತಾಂಶ ಲಭ್ಯವಾಗಿಲ್ಲ. ಹಂತ ಹಂತವಾಗಿ ಫಲಿತಾಂಶಗಳನ್ನು ಬಿಡುಗಡೆ ಮಾಡುವ ಕ್ರಮವನ್ನು ಮಂಡಳಿ ಅನುಸರಿಸಿದೆ. ಇದರ ಪರಿಣಾಮವಾಗಿ, ಕೆಲವು ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಮೊದಲು ಫಲಿತಾಂಶ ಲಭ್ಯವಾಗುವ ಸಾಧ್ಯತೆ ಇದೆ. ವಿಶೇಷವಾಗಿ ದಕ್ಷಿಣ ಕನ್ನಡ ಸೇರಿದಂತೆ ಕೆಲವು ಜಿಲ್ಲೆಗಳ ಕಾಲೇಜುಗಳಿಗೆ ಮೊದಲ ಹಂತದಲ್ಲೇ ಫಲಿತಾಂಶ ತಲುಪುವ ಸಾಧ್ಯತೆ ಇದ್ದು, ಇತರ ಪ್ರದೇಶಗಳ ವಿದ್ಯಾರ್ಥಿಗಳು ಸ್ವಲ್ಪ ಸಮಯ ಕಾಯಬೇಕಾಗಬಹುದು.
ಪ್ರಥಮ ಪಿಯುಸಿ ಫಲಿತಾಂಶ 2026 ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ?
ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಲು ಈ ಸರಳ ಹಂತಗಳನ್ನು ಅನುಸರಿಸಿ;
- ಹಂತ 1: ಮೊದಲಿಗೆ ಕರ್ನಾಟಕ ಪರೀಕ್ಷಾ ಫಲಿತಾಂಶದ ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ.
- ಹಂತ 2: ಮುಖಪುಟದಲ್ಲಿ ಕಾಣಿಸುವ ‘1st PUC Annual Exam Result 2026’ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಹಂತ 3: ಈಗ ಹೊಸ ಪುಟ ತೆರೆಯುತ್ತದೆ, ಅಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು (Registration Number) ನಮೂದಿಸಿ.
- ಹಂತ 4: ನಿಮ್ಮ ವಿಷಯದ ಸ್ಟ್ರೀಮ್ (Science/Arts/Commerce) ಅನ್ನು ಆಯ್ಕೆ ಮಾಡಿ.
- ಹಂತ 5: ಎಲ್ಲಾ ವಿವರಗಳನ್ನು ಭರ್ತಿ ಮಾಡಿದ ನಂತರ ‘Submit’ ಬಟನ್ ಮೇಲೆ ಕ್ಲಿಕ್ ಮಾಡಿ.
- ಹಂತ 6: ನಿಮ್ಮ ಫಲಿತಾಂಶವು ಪರದೆಯ ಮೇಲೆ ಕಾಣಿಸುತ್ತದೆ. ಭವಿಷ್ಯದ ಉಲ್ಲೇಖಕ್ಕಾಗಿ ಇದನ್ನು ಡೌನ್‌ಲೋಡ್ ಮಾಡಿಕೊಳ್ಳಿ ಅಥವಾ ಪ್ರಿಂಟ್ ಔಟ್ ತೆಗೆದುಕೊಳ್ಳಿ.
ರಿಸಲ್ಟ್ ನೋಡುವುದು ಎಲ್ಲಿ ??..
- karresults.nic.in
- kseab.karnataka.gov.in ಈ ಎರಡು ವೆಬ್ಸೈಟ್ಗಳಲ್ಲಿ ಪಿಯುಸಿ ಫಲಿತಾಂಶ ಲಭ್ಯವಿರಲಿದೆ.
ವೆಬ್‌ಸೈಟ್ ಮೇಲೆ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಫಲಿತಾಂಶ ಪ್ರಕಟಣೆಯಲ್ಲಿ ಕೊಂಚ ಬದಲಾವಣೆ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಮಂಡಳಿ ಸೂಚಿಸಿದ್ದು, ದಿನದ ಅವಧಿಯಲ್ಲಿ ಎಲ್ಲರಿಗೂ ಫಲಿತಾಂಶ ಲಭ್ಯವಾಗಲಿದೆ ಎಂದು ಸ್ಪಷ್ಟಪಡಿಸಿದೆ.
