ಹೊನ್ನಾವರ:
ತಾಲೂಕಿನ ಹಡಿನಬಾಳ ಸರಕಾರಿ ಪ್ರೌಢಶಾಲೆಯಲ್ಲಿ ಕುವೆಂಪು ಕನ್ನಡ ಭಾಷಾ ಸಂಘ ಮತ್ತು ಇತರೆ ಎಲ್ಲಾ ಶಾಲಾ ಸಂಘಗಳ ಉದ್ಘಾಟನಾ ಕಾರ್ಯಕ್ರಮ ಹಾಗೂ ಸಹ್ಯಾದ್ರಿ ಕೈ ಬರಹ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಉದ್ಘಾಟಕರಾಗಿ ಆಗಮಿಸಿದ ಡಾ. ಜಿ.ಎಸ್ .ಹೆಗಡೆ, ವಿಶ್ರಾಂತ ಪ್ರಾಚಾರ್ಯರು, ಅಳ್ಳಂಕಿ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ “ಕನ್ನಡದ ಕುರಿತಾದ ಸೇವಾಭಾವ ಜಾಗೃತಗೊಳ್ಳಬೇಕು. ಸಂಘಗಳ ಆಶಯಕ್ಕನುಗುಣವಾಗಿ ವಿದ್ಯಾರ್ಥಿಗಳು ಸೃಜನಶೀಲ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು” ಎಂದರು. ಶಾಲೆಯ ಮುಖ್ಯಾಧ್ಯಾಪಕರಾದ ಶ್ರೀಮತಿ ಜ್ಯೋತಿ ಭಂಡಾರಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು.
ಕುವೆಂಪು ಕನ್ನಡ ಭಾಷಾ ಸಂಘದ ವತಿಯಿಂದ ನಾಡಗೀತೆ ಗಾಯನ ಸ್ಪರ್ಧೆಯನ್ನು ನಡೆಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಕುಮಾರಿ ವಂದನಾ ನಾಯ್ಕ ಸಂಗಡಿಗರು ಪ್ರಾರ್ಥಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ವಿಶ್ವನಾಥ ಗೌಡ ಸ್ವಾಗತಿಸಿದರು. ಕನ್ನಡ ಭಾಷಾ ಶಿಕ್ಷಕರಾದ ವಿಷ್ಣು ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
