ಭಟ್ಕಳ:
ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧದ ಅಂತರರಾಷ್ಟ್ರೀಯ ದಿನದ ಅಂಗವಾಗಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್, ಮುರುಡೇಶ್ವರ ಪೊಲೀಸ್ ಠಾಣೆ,ಮತ್ತು ಭಟ್ಕಳ ಗ್ರಾಮಾಂತರ ಪೊಲೀಸ್ ವೃತ್ತದ ವತಿಯಿಂದ ಮುರುಡೇಶ್ವರದಲ್ಲಿ ಜಾಗೃತಿ ಬೈಕ್ ರ‍್ಯಾಲಿ ನಡೆಸಲಾಯಿತು.

ಮುರುಡೇಶ್ವರದ ಶಿವನ ದೇವಸ್ಥಾನ ಆವರಣದಿಂದ ಆರಂಭವಾದ ರ‍್ಯಾಲಿಯು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿತು. ಈ ವೇಳೆ ಪೊಲೀಸರು ಮಾದಕ ವಸ್ತುಗಳ ಬಳಕೆ ಹಾಗೂ ಅಕ್ರಮ ಸಾಗಾಣಿಕೆಯನ್ನು ತಡೆಗಟ್ಟಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದರು.

ರ‍್ಯಾಲಿಯಲ್ಲಿ ಸಿಪಿಐ ಜಗದೀಶ ಹಂಚನಾಳ, ಪಿಎಸೈ ಹನುಮಂತ ಬಿರಾದಾರ, ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ, ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವ ಸಂದೇಶವನ್ನು ಸಾರಿದರು.
