ಬೆಂಗಳೂರು: ಕರುನಾಡಿನಲ್ಲಿ ಮತ್ತೆ ವರುಣನ ಅಬ್ಬರ ಶುರುವಾಗಿದೆ. ರಾಜ್ಯದಲ್ಲಿ ಇನ್ನೊಂದು ವಾರ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಭಾಗದಲ್ಲಿ ಈ ವಾರ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಮಲೆನಾಡು ಭಾಗದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಿಗೆ 5 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದ ಬಹುತೇಕ ಕಡೆ ಉತ್ತಮ ಮಳೆ ನಿರೀಕ್ಷೆಯಿದ್ದು, ಆ.23 ಮತ್ತು 24ರಂದು ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆ. 24 ರ ಬಳಿಕ ರಾಜ್ಯದಲ್ಲಿ ವರುಣನ ಆರ್ಭಟ ಇನ್ನಷ್ಟು ಹೆಚ್ಚಾಗಲಿರುವ ಸಾಧ್ಯತೆಯಿದೆ.
ಆ.24ರಂದು ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಆ. 25 ರಂದು ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಮಳೆ ಹೆಚ್ಚಾಗುವ ಕುರಿತು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.