ನವದೆಹಲಿ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಗೆ ಕೋವಿಡ್–19 ದೃಢಪಟ್ಟಿದೆ. ಹೀಗಾಗಿ ದುಬೈನಲ್ಲಿ ನಡೆಯಲಿರುವ ಏಷ್ಯಾ ಕಪ್ ಟೂರ್ನಿಗೆ ತಂಡದ ಜೊತೆ ತೆರಳುವುದಿಲ್ಲ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ತಿಳಿಸಿದೆ.
ಜಿಂಬಾಬ್ವೆ ವಿರುದ್ಧ ಸೋಮವಾರ ಕೊನೆಗೊಂಡ ಏಕದಿನ ಕ್ರಿಕೆಟ್ ಸರಣಿಗೂ ತಂಡದ ಜತೆ ದ್ರಾವಿಡ್ ಇರಲಿಲ್ಲ. ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ಆ. 27 ರಂದು ಆರಂಭಗೊಳ್ಳಲಿದೆ. ಭಾರತ ತಂಡವು ಮೊದಲ ಪಂದ್ಯವನ್ನು 28 ರಂದು ಪಾಕಿಸ್ತಾನ ವಿರುದ್ಧ ಆಡಲಿದ್ದಾರೆ.