ಕಾರವಾರ: 2022-23 ನೇ ಸಾಲಿನ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2 ನೇ ವರ್ಷದ 3 ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕಾಗಿ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ 2 ವರ್ಷಗಳ ಐ.ಟಿ.ಐ, ವಿಜ್ಞಾನ ವಿಷಯದಲ್ಲಿ ದ್ವಿತೀಯ ಪಿ.ಯು.ಸಿ ಹಾಗೂ ತಾಂತ್ರಿಕ ವಿಷಯಗಳಲ್ಲಿ ದ್ವಿತೀಯ ಪಿ.ಯು.ಸಿ ಮಾಡಿದ ಅಭ್ಯರ್ಥಿಗಳು ಕಾರವಾರದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿ ನಮೂನೆಯನ್ನು, ಸಂಬಂಧಿಸಿದ ದಾಖಲಾತಿಗಳ ಜೆರಾಕ್ಸ್ ಪ್ರತಿಯೊಂದಿಗೆ ಆ. 30 ರೊಳಗೆ ಕಾರವಾರ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಗೆ ಸಲ್ಲಿಸಬೇಕು.
ಅರ್ಹ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಸೆಪ್ಟೆಂಬರ 1 ರಂದು ಸಂಸ್ಥೆಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗುವುದು ಮತ್ತು ಸೀಟು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ಮೂಲ ದಾಖಲೆಗಳು ಮತ್ತು ನಿಗದಿತ ಶುಲ್ಕದೊಂದಿಗೆ ಸೆಪ್ಟೆಂಬರ 5 ರೊಳಗೆ ಪ್ರವೇಶ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08382-226343, 9448995682 ಗೆ ಕಾಲೇಜು ಮತ್ತುತಾಂತ್ರಿಕ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ dtetech.karnataka.gov.in/kartechnical ಅಥವಾ dtek.karnataka.gov.in ಅಥವಾ ಸರ್ಕಾರಿ, ಅನುದಾನಿತ ಪಾಲಿಟೆಕ್ನಿಕ್ ಸಂಸ್ಥೆಯ ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಎಂದು ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.