ಬನವಾಸಿ: ಬನವಾಸಿ ಹೋಬಳಿ ವ್ಯಾಪ್ತಿಯ ಅಂಡಗಿ ಗ್ರಾಮದಲ್ಲಿ ಹಣ್ಣು ಮತ್ತು ತರಕಾರಿಗಳನ್ನು ಸಂರಕ್ಷಿಸಿ ಇಡಬಹುದಾದಂತಹ ಶೀತಲ ಸಂಗ್ರಹಾಗಾರ (ಕೋಲ್ಡ್ ಸ್ಟೋರೇಜ್) ನಿರ್ಮಾಣಕ್ಕೆ ಕೃಷಿ ಇಲಾಖೆಯ ಮೂಲಕವಾಗಿ 9.5 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ರೈತರು ತಾವು ಬೆಳೆದ ಹಣ್ಣು ಮತ್ತು ತರಕಾರಿಗಳನ್ನು ಈ ಶೀತಲಾಗಾರದಲ್ಲಿ ಸಂರಕ್ಷಿಸಿಟ್ಟು ಉತ್ತಮ ಬೆಲೆ ಬಂದಾಗ ಮಾರಾಟ ಮಾಡಬಹುದಾಗಿದೆ.
ನನ್ನ ಮನವಿಗೆ ಶೀಘ್ರವಾಗಿ ಸ್ಪಂದಿಸಿ ರೈತಾಪಿ ವರ್ಗಕ್ಕೆ ಅನುಕೂಲವಾಗುವಂತೆ ಯೋಜನೆ ಮಂಜೂರು ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಾಗೂ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರಿಗೆ ಈ ಭಾಗದ ರೈತರ ಪರವಾಗಿ ತುಂಬು ಹೃದಯ ಧನ್ಯವಾದಗಳು.
– ಶಿವರಾಮ ಹೆಬ್ಬಾರ್
ಕಾರ್ಮಿಕ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಹಾವೇರಿ