ಚಿಕ್ಕಬಳ್ಳಾಪುರ: ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಬೇಕಾಬಿಟ್ಟಿ ಟಿಪ್ಪರ್ ಗಳು ಸಂಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ನಂದಿ ಕ್ರಾಸ್ ಬಳಿ ಜಲ್ಲಿ ಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಗಳನ್ನು ತಡೆದು ಯಲುವಲ್ಲಿ ದೇವಿಶೆಟ್ಟಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಕಣಿವೆ ನಾರಾಯಣಪುರದಿಂದ ಬೆಂಗಳೂರಿಗೆ ಜಲ್ಲಿ ಸಾಗಾಟ ಮಾಡಲಾಗುತ್ತಿದೆ. ರಸ್ತೆಯಲ್ಲಿ ಜಲ್ಲಿ ಹಾಗೂ ಎಂ -ಸ್ಯಾಂಡ್ ಬಳಸಿಕೊಂಡು ಟಿಪ್ಪರ್ ಗಳು ಸಂಚರಿಸುತ್ತಿವೆ. ಇದರಿಂದ ರಸ್ತೆಯಲ್ಲಿ ಸಂಚರಿಸಲು ಕಾರು, ಬೈಕ್ ಸವಾರರು ಪರದಾಟ ಅನುಭವಿಸುತ್ತಿದ್ದಾರೆ. ಟಿಪ್ಪರ್ ಗಳ ವಿರುದ್ದ ಕ್ರಮ ಕೈಗೊಳ್ಳದ ಸಾರಿಗೆ, ಕಂದಾಯ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ವಿರುದ್ದ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.