ಸಿದ್ದಾಪುರ: ಕರ್ನಾಟಕ ಹಾಗೂ ಗುಜರಾತನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿ ಕಣಕ್ಕಿಳಿಸುವ ಗುರಿ ಹೊಂದಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ವಿವೇಕಾನಂದ ಸಾಲಿನ್ಸ್ ತಿಳಿಸಿದರು.
ಪಟ್ಟಣದ ಬಾಲಭವನದಲ್ಲಿ ಬುಧವಾರ ನಡೆದ ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿ, ನಾವು ಶಿಕ್ಷಣ ಹಾಗೂ ಅರೋಗ್ಯ ಸೇವೆಯಲ್ಲಿ ಕ್ರಾಂತಿ ಮಾಡಿದ್ದೇವೆ. ನಮ್ಮ ಒಳ್ಳೆ ಕೆಲಸ ಹಾಗೂ ಸರಳತೆ ನೋಡಿ ಪಂಜಾಬಿನಲ್ಲಿ ಜನ ಕೈಹಿಡಿದಿದ್ದಾರೆ. ಆಮ್ ಆದ್ಮಿ ಪಕ್ಷವು ಕಾಂಗ್ರೆಸ್ ಹಾಗೂ ಬಿಜೆಪಿಗೆ ಪರ್ಯಾಯ ಪಕ್ಷವಾಗಿ ರೂಪುಗೊಳ್ಳುತ್ತಿದೆ. ಗುಜರಾತಿನಲ್ಲಿ ಅಧಿಕಾರ ಹಿಡಿಯುವ ಭಯದಲ್ಲಿ ಮೋದಿ ಸಿಬಿಐ, ಐಟಿ ಮೂಲಕ ಆಮ್ ಆದ್ಮಿ ಪಕ್ಷದ ಮುಖಂಡರ ಮನೆ ಮೇಲೆ ದಾಳಿ ಮಾಡಿಸುತ್ತಿದ್ದಾರೆ. ಹಂತ ಹಂತವಾಗಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುತ್ತೇವೆ. ದೆಹಲಿ ಮಾದರಿಯನ್ನು ಜನರ ಮುಂದಿಟ್ಟು ಜನರ ಬಳಿಗೆ ಹೋಗುತ್ತೇವೆ ಎಂದರು.
ಈ ವೇಳೆ ಆಮ್ ಆದ್ಮಿ ಪಕ್ಷದ ಕರಾವಳಿ ವಲಯ ಪ್ರಧಾನ ಕಾರ್ಯದರ್ಶಿ ಕೀರ್ತಿರಾಜ್, ಉತ್ತರ ಕನ್ನಡ ಜಿಲ್ಲಾ ಉಪಾಧ್ಯಕ್ಷ ವೀರಭದ್ರ ನಾಯ್ಕ, ಸಿದ್ದಾಪುರ ತಾಲೂಕಾ ಅಧ್ಯಕ್ಷ ಲಕ್ಷ್ಮಣ ನಾಯ್ಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಕಾಶ್ ಕೊಂಡ್ಲಿ,ರೈತ ಸಂಘದ ಅಧ್ಯಕ್ಷ ಕೆರಿಯಪ್ಪ ನಾಯ್ಕ ಹಾಗೂ ಇತರ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.