ಜಿಲ್ಲೆಯಲ್ಲಿ ಇನ್ನೂ ಮೂರು ದಿನ ಮಳೆ ಸುರಿಯುವ ಸಾಧ್ಯತೆ.!

ಉತ್ತರ ಕನ್ನಡ: ಜಿಲ್ಲೆಯಲ್ಲಿ ಇಂದು ಸಹ ವರುಣನ ಆರ್ಭಟ ಮುಂದುವರೆದಿದ್ದು, ಅಬ್ಬರದ ಮಳೆ ಸುರಿಯುತ್ತಿದೆ. ಜಿಲ್ಲೆಯಲ್ಲಿ ಒಟ್ಟು 171.6 ಮಿ.ಮೀ ಮಳೆ ಸುರಿದಿದ್ದು, ಜೋಯಿಡಾದಲ್ಲಿ 25.4 ಮಿ.ಮೀ ಮಳೆಯಾಗಿದೆ. ಇಂದು ಸಹ ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಇದ್ದು, ಇನ್ನೂ ಮೂರು ದಿನಗಳ ಕಾಲ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.