ಕಾರವಾರ: 2022-23 ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಸಾಮಾನ್ಯ ಹಾಗೂ ಮಾದರಿ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳು ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳು ಸೆ.12 ರ ಒಳಗಾಗಿ ಇಲಾಖಾ ವೆಬ್‌ಸೈಟ್ www.bcwd.Karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ 08382-226588 ಗೆ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಜಿ. ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.