ಸಿದ್ದಾಪುರ: ತಾಲೂಕಿನ ಶಿರಳಗಿ ನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ಬುಧವಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಕಾರ್ಯಕ್ರಮ ನಡೆಯಿತು. ಶಿರಳಗಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಲತಾ ರಮೇಶ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿದರು.
ಸಭೆಯಲ್ಲಿ 45 ಮನವಿಗಳು ಸ್ವೀಕೃತವಾಗಿದ್ದು, ಸಾರ್ವಜನಿಕರು ಅನೇಕ ಅಹವಾಲು ಸಲ್ಲಿಸಿದರು. ಈ ವೇಳೆ ಶಿರಳಗಿ ಗ್ರಾಮ ಪಂಚಾಯತ ಉಪಾಧ್ಯಕ್ಷ ಶ್ರೀಕಾಂತ ಭಟ್, ತಾಲ್ಲೂಕಿನ ಎಲ್ಲಾ ಅಧಿಕಾರಿಗಳು, ಉಪಸ್ಥಿತರಿದ್ದರು. ಸಭೆಯ ನಂತರ ತಹಶೀಲ್ದಾರ ಸಂತೋಷ ಭಂಡಾರಿ ಸ್ಥಳೀಯ ಆಶ್ರಯ ಕಾಲೋನಿ ಹಾಗೂ ಮತ್ತಿತರ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.