ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಹೋಂಡಾ ಶೋರೂಮ್ ಹತ್ತಿರ ಕಾರು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು ಹುಬ್ಬಳ್ಳಿಯ ವಿವೇಕಾನಂದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಕ್ಕೋಳ್ಳಿ ಗ್ರಾಮದವರಾದ ಮಹೇಶ ಪುಂಡಲೀಕ ಅರ್ಕಸಾಲಿ ಗಂಭೀರ ಗಾಯಗೊಂಡ ಬೈಕ ಸವಾರ. ಶಿರಸಿ ಕಡೆಯಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಕಾರು ಹಾಗೂ ಮುಂಡಗೋಡ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ.
ಬೈಕ್ ಸವಾರನಿಗೆ ತಲೆಯ ಭಾಗಕ್ಕೆ ಗಂಬೀರ ಗಾಯಗಳಾಗಿದ್ದು ತಾಲೂಕಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ವಿವೇಕಾನಂದ ಆಸ್ಪತ್ರೆಗೆ ದಾಖಲಿಸಲಾಗಿದೆ. 108 ಆಂಬುಲೆನ್ಸನ ವೈದ್ಯಕೀಯ ತಂತ್ರಜ್ಞ ಧನರಾಜ್ ಹುಬ್ಬಳ್ಳಿಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ